ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೌಕರರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. 7ನೇ ವೇತನ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ.ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ನೇತೃತ್ವದಲ್ಲಿ ಏಳನೇವೇತನ ಆಯೋಗ ರಚನೆ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆಯಲ್ಲಿ ತಿಳಿಸಿದರು. ದಾವಣಗೆರೆಯ ಜಿಎಂಐಟಿ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಏಳು ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಲಾಗುತ್ತಿದೆ. ಶೇಕಡಾ 80ರಷ್ಟು ಬೆಂಗಳೂರು ಹೊರತುಪಡಿಸಿ ಹೂಡಿಕೆ ಆಗುತ್ತದೆ. ಹುಬ್ಬಳ್ಳಿ, ಧಾರವಾಡ, ಮಂಗಳೂರು, ಮೈಸೂರು, ದಾವಣಗೆರೆ, ಬೀದರ್ ಸೇರಿದಂತೆ 13 ಜಿಲ್ಲೆಗಳಲ್ಲಿ ಹೂಡಿಕೆ ಆಗಲಿದೆ. ಪ್ರಾದೇಶಿಕತೆಗೆ ಅನುಗುಣವಾಗಿ ಕೈಗಾರಿಕೆಗಳು ಬರುತ್ತವೆ ಎಂದು ತಿಳಿಸಿದರು.