ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಅವರು, ಜನ ನಮ್ಮ ಭರವಸೆಗಳ ಮೇಲೆ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ನಾವು ಬಸವಣ್ಣ, ಕುವೆಂಪು, ಶಿಶುನಾಳ ಷರೀಫರು, ಕನಕದಾಸರ ನಾಡಿನವರು. ಹೀಗಾಗಿ ಕೊಟ್ಟ ಮಾತಿಗೆ ಬದ್ಧರಾಗಿರುತ್ತೇವೆ. ಎಲ್ಲಾ ಐದು ಗ್ಯಾರಂಟಿ ಅನುಷ್ಠಾನ ಘೋಷಿಸಿದ್ದೇವೆ. ಸರ್ಕಾರಿ ನೌಕರರು ಹಾಗೂ ಇತರೆ ಸಂಘ ಸಂಸ್ಥೆಗಳು ನಮಗೆ ಈ ಯೋಜನೆಗಳ ಸೌಲಭ್ಯ ಬೇಡ ಎಂದು ಸ್ವಇಚ್ಛೆಯಿಂದ ನಮಗೆ ಪತ್ರ ಬರೆದಿದ್ದಾರೆ. ಯೋಜನೆಯ ಲಾಭವನ್ನು ತ್ಯಜಿಸಲು ಇಚ್ಛಿಸಿದರೆ ಅದನ್ನು ಸರ್ಕಾರ ಸ್ವಾಗತ ಮಾಡಲಿದೆ. ಎಂದು ಹೇಳಿದ್ದಾರೆ.