ವೇತನ ಪರಿಷ್ಕರಣೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮಾರ್ಚ್21ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ ಬೆನ್ನಲ್ಲೇ ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಾರಿಗೆ ನೌಕರರ ಶೇ.15 ರಷ್ಟು ವೇತನ ಹೆಚ್ಚಳ ಮಾಡುತ್ತೇವೆ ಎಂದು ಹೇಳುವ ಮೂಲಕ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇನ್ನೂ ಕೆಪಿಟಿಸಿಎಲ್ ನೌಕರರ ಶೇ.20 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನ ಮಾಡಿದ್ದು, ಇಂದು ಆದೇಶ ಹೊರಡಿಸುತ್ತೇವೆ ಎಂದು ಹೇಳಿದ್ದಾರೆ.