ಸಾವರ್ಕರ್ ಕುರಿತಾದ ವಿಚಾರಗಳನ್ನು ಪಠ್ಯಪುಸ್ತಕಗಳಿಂದ ಕೈಬಿಡುವ ಕಾಂಗ್ರೆಸ್ ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ವಂಚನೆ: ರಂಜಿತ್ ಸಾವರ್ಕರ್

ಗೋವಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಅವರು, ಸಾವರ್ಕರ್ ಕುರಿತಾದ ವಿಚಾರಗಳನ್ನು ಪಠ್ಯಪುಸ್ತಕಗಳಿಂದ ಕೈಬಿಡುವ ಕಾಂಗ್ರೆಸ್ ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ಕಲಿಯುವ ಅವಕಾಶದಿಂದ ವಂಚಿತರಾಗುತ್ತಾರೆ. ಯಾವುದನ್ನು ತಡೆಯಲು ಬಯಸುತ್ತೇವೆಯೋ ಅದು ಮತ್ತಷ್ಟು ಪ್ರಬಲಗೊಳ್ಳುತ್ತದೆ. ಪ್ರತಿಯೊಂದು ಕ್ರಿಯೆಗೂ ಅದರ ಸಮಾನ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂಬ ನ್ಯೂಟನ್‍ನ ಮೂರನೇ ನಿಯಮವನ್ನು ಉದಾಹರಣೆ ನೀಡಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಸಾವರ್ಕರ್ ಅವರ ವಿಚಾರಗಳ ಮಾಹಿತಿ ಸಿಗುತ್ತದೆ. ಈಗಾಗಲೇ ಅವರ ಬರಹಗಳನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಮುಂದಿನ ದಿನಗಳಲ್ಲಿ ಆ ಬರಹಗಳನ್ನು ಕನ್ನಡದಲ್ಲೂ ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *