ಕರ್ನಾಟಕದಲ್ಲಿನ ರಾಜ್ಯ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಒಟ್ಟು ಸುಮಾರು 7,601 ಕೊಠಡಿಗಳ ನಿರ್ಮಿಸಲು ಸರ್ಕಾರ ಉದ್ದೇಶಿಸಿದ್ದು, ಕೊಠಡಿ ನಿರ್ಮಾಣದ ‘ವಿವೇಕ’ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಚಾಲನೆ ನೀಡಿದರು. ಈ ಶಾಲೆಗೆ ಹೆಚ್ಚುವರಿಯಾಗಿ ಇನ್ನೂ ನಾಲ್ಕು ಕೊಠಡಿಗಳನ್ನು ನಿರ್ಮಿಸಿಕೊಡಲಾಗುವುದು ಮತ್ತು ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳನ್ನೂ ಮೀರಿಸುವಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಅದರಲ್ಲೂ ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಚಾಲನೆ ಪಡೆದ ‘ಮಲ್ಲೇಶ್ವರಂ ಶಾಲಾ ಮಾದರಿ’ಯು ಇಡೀ ರಾಜ್ಯದಲ್ಲಿಯೇ ಗಮನ ಸೆಳೆಯುವಂತಿದೆ. ಅದೇ ರೀತಿಯಲ್ಲಿ ಇನ್ನಿತರ ಸರ್ಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣ ಜೊತೆಗೆ ಮೂಲಸೌಕರ್ಯಗಳು ಇನ್ನಷ್ಟು ಅಭಿವೃದ್ಧಿಗೊಳ್ಳಲಿವೆ ಎಂದು ಹೇಳಿದರು.