ಸಿಎಂ ಕುರ್ಚಿಗೆ ಟವೆಲ್ ಹಾಕಿದವರು ಚುನಾವಣೆ ಖರ್ಚಿಗೆ 2 ಸಾವಿರ ಕೋಟಿ ಕೊಡುವುದಾಗಿ ಹೇಳಿದ ಮಾಹಿತಿ ಇದೆ: ಸಿ ಟಿ ರವಿ

ಬೆಂಗಳೂರಿನ ಗುತ್ತಿಗೆದಾರರ ಮನೆಯಲ್ಲಿ ಬರೋಬ್ಬರಿ 42 ಕೋಟಿ ಹಣ ಪತ್ತೆಯಾದ ಬೆನ್ನಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್‌ನಡುವೆ ವಾಕ್ಸಮರ ಹೆಚ್ಚಾಗಿದ್ದು, ಪಂಚರಾಜ್ಯಗಳ ಚುನಾವಣೆ ಹಿನ್ನಲೆ ಕರ್ನಾಟಕದಿಂದ ಹಣ ಸಂಗ್ರಹಿಸಲಾಗುತ್ತಿದೆ ಎಂದು
ಈ ಕುರಿತು ಮಾಜಿ ಸಚಿವ ಸಿ ಟಿ ರವಿ ಮಾತನಾಡಿ, ಸಿಎಂ ಕುರ್ಚಿಗೆ ಟವೆಲ್ ಹಾಕಿದವರೊಬ್ಬರು ಚುನಾವಣೆ ಖರ್ಚಿಗೆ ಎರಡು ಸಾವಿರ ಕೋಟಿ ಕೊಡುವುದಾಗಿ ಹೇಳಿದ ಮಾಹಿತಿ ಇದೆ. ಹಾಲಿ ಮುಖ್ಯಮಂತ್ರಿಗಳು ಕಷ್ಟಪಟ್ಟು ಅದರ ಅರ್ಧ ವ್ಯವಸ್ಥೆ ಮಾಡುವುದಾಗಿ ಹೇಳಿದ ಮಾಹಿತಿ ಸಿಕ್ಕಿದೆ ಎಂದು ಹೇಳಿದ್ದಾರೆ.ಅಂತರರಾಜ್ಯ ವಿಷಯವಾದ ಕಾರಣ ಸಿಬಿಐ ತನಿಖೆಗೆ ಆಗ್ರಹಿಸುವುದಾಗಿ ಹೇಳಿದ ಅವರು, ಐಟಿ ದಾಳಿ ಹಿಂದೆ ರಾಜಕೀಯ ಇರುತ್ತದೆ ಎಂದು ಉಪ ಮುಖ್ಯಮಂತ್ರಿ ಹೇಳಿದರೆ, ಎಲ್ಲ ಖಾತೆ ತಮ್ಮ ಕೈಯಲ್ಲಿ ಇರುವಂತೆ ವರ್ತಿಸುವ ಪ್ರಿಯಾಂಕ್ ಖರ್ಗೆಯವರು ದಾಳಿ ವಿರುದ್ಧ ಅಣಿಮುತ್ತು ಉದುರಿಸುತ್ತಾರೆ ಎಂದು ಟೀಕಿಸಿದರು. ಏಕ್ ತರಫ್ ಸೆ ಆಲೂ ಡಾಲ್‍ನ, ದೂಸ್‍ರಾ ತರಫ್ ಸೆ ಸೋನಾ ನಿಕಾಲ್‍ನ ಎಂಬಂತೆ ದುಡ್ಡು ತೆಗೆದಿದ್ದಾರಾ ಎಂದು ವ್ಯಂಗ್ಯವಾಡಿದರು.ಅಬಕಾರಿ ಸುಂಕ, ವಿದ್ಯುತ್ ದರ, ಸ್ಟ್ಯಾಂಪ್ ಶುಲ್ಕ ಹೀಗೆ ಎಲ್ಲ ಬೆಲೆಏರಿಸಿದ ಬಳಿಕ ಬಾಕಿ ಬಿಲ್ ನೀಡಲು ನೀವು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದೀರಿ. ಬಹುಶಃ ಪಂಜಾಬ್ ಬಳಿಕ ಕರ್ನಾಟಕದ ಸಿಎಂ ಕೂಡ ತನ್ನ ರಾಜ್ಯ ದಿವಾಳಿ ಆಗುತ್ತಿದೆ ಎಂದು ಮುನ್ಸೂಚನೆ ಕೊಟ್ಟಿದ್ದಾರೆ. ಇಷ್ಟಾದರೂ ಇವರು ನುಡಿದಂತೆ ನಡೆದಿದ್ದೇವೆ ಎಂದು ಜಾಹೀರಾತು ಕೊಡುವುದನ್ನು ನಿಲ್ಲಿಸಿಲ್ಲ. ಈ ಸರಕಾರ ವಸೂಲಿ ಸರಕಾರ ಎಂದು ಟ್ಯಾಗ್‍ಲೈನ್ ಕೊಟ್ಟರೆ ತಪ್ಪಾಗದು. ಹಾಗಾಗಿ ವಸೂಲಿಗೆ ಸಂಬಂಧಿಸಿ ಸಿಬಿಐ ತನಿಖೆಗೆ ಆಗ್ರಹಿಸುವುದಾಗಿ ತಿಳಿಸಿದರು.

Leave a Reply

Your email address will not be published. Required fields are marked *