ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಬಿಎಂಪಿ ವಾರ್ಡ್‌ಗಳ ಪುನರ್ ರಚನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಸಂಬಂಧ ಇದೇ ತಿಂಗಳ 11ರಂದು ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ನ್ಯಾಯಪೀಠವು ಆ.16ರವರೆಗೆ ವಾರ್ಡ್‍ವಾರು ಮೀಸಲು ಪಟ್ಟಿ ಅಂತಿಮಗೊಳಿಸದಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅಷ್ಟೇ ಅಲ್ಲದೆ, ಹೈಕೋರ್ಟ್‌ನಲ್ಲಿ ಇಂದು ವಾದ-ಪ್ರತಿವಾದ ನಡೆಯುತ್ತಿದೆ. ಈ ನಡುವೆ ಚಾಮರಾಜಪೇಟೆಯ ಶಾಸಕ ಜಮೀರ್ ಅಹಮದ್ ಖಾನ್ ಸಿಎಂ ಬಸವರಾಜ ಬೊಮ್ಮಾಯಿರನ್ನು ಭೇಟಿಯಾಗಿದ್ದಾರೆ..