ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು.ಹೇಳಿಕೆ ಬೆನ್ನಲ್ಲೆ ಸ್ಪಷ್ಟನೆ ನೀಡಿದ ಅಶ್ವತ್ಥ ನಾರಾಯಣ್

ಮಂಡ್ಯ ಜಿಲ್ಲೆಯ ಸಾತನೂರು ಹೊರವಲಯದ ಕಂಬದ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥ ನಾರಾಯಣ್ ಟಿಪ್ಪು ಸುಲ್ತಾನ್ ಅವರನ್ನು ನಿಂದಿಸುವ ಬರದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. “ನಿಮಗೆ ಟಿಪ್ಪು ಬೇಕಾ..? ಸಾವರ್ಕರ್ ಬೇಕಾ..? ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಉರಿಗೌಡ ಮತ್ತು ನಂಜೇಗೌಡ ಏನ್ ಮಾಡಿದ್ದರು. ಹಾಗೇಯೇ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು” ಎಂದು ಹೇಳಿದ್ದರು. ಭಾರೀ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಸಚಿವ ಅಶ್ವತ್ಥ ನಾರಾಯಣ್, ಇದು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗವಾಗಿದೆ. ನಾನು ಆಡಿರುವ ಮಾತುಗಳನ್ನು ಆ ಚೌಕಟ್ಟಿನಲ್ಲೇ ನೋಡಬೇಕು. ಇದು ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *