ಬಿಜೆಪಿ ಜನೋತ್ಸವ ಅಲ್ಲ, ಭ್ರಷ್ಟೋತ್ಸವ ಎಂಬ ಸಿದ್ದರಾಮಯ್ಯ ಅವರ ಆರೋಪ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ ಅವರು, ತಾನು ಮುಖ್ಯಮಂತ್ರಿ ಆಗಿದ್ದ ವೇಳೆ ಭ್ರಷ್ಟಾಚಾರ ಮಾಡಿಯೇ ಇಲ್ಲ ಅಂತಾ ಚಾಮುಂಡೇಶ್ವರಿ ಮೇಲೆ ಆಣೆ ಮಾಡಿಲಿ. ಇದು ಜನೋತ್ಸವ ಅಲ್ಲ ಭ್ರಷ್ಟೋತ್ಸವ ಅಂತಾ ಆಗ ನಾನು ಕೂಡಾ ಒಪ್ಪಿಕೊಳ್ಳುತ್ತೇನೆ. ಬಿಜೆಪಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕಾರ್ಯ ನೋಡಿ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಕೇಂದ್ರದಲ್ಲೂ ರಾಜ್ಯದಲ್ಲೂ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಅನೇಕ ಮುಖಂಡರು ಹೊರಗೆ ಬರುತ್ತಿದ್ದಾರೆ. ಅವರ ಪಕ್ಷವನ್ನು ಉಳಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಬಿಜೆಪಿ ವಿರುದ್ಧ ಆಪಾದನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.