ಸಿದ್ದು ಪ್ರಮಾಣವಚನ ಕಾರ್ಯಕ್ರಮದಲ್ಲಿ ದೊಡ್ಡ ಭದ್ರತಾ ಲೋಪ ವೇದಿಕೆ ಮೇಲೆ ಕ್ರಿಮಿನಲ್‌ಹಿನ್ನಲೆಯುಳ್ಳ ವ್ಯಕ್ತಿ- ತನಿಖೆಗೆ ರಾಜ್ಯಪಾಲರ ಪತ್ರ

ಸಿದ್ದರಾಮಯ್ಯ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ದೊಡ್ಡ ಭದ್ರತಾ ಲೋಪ ಆಗಿದೆ. ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಿಸಿದ ಕಾರ್ಯಕ್ರಮದಲ್ಲಿ ಕ್ರಿಮಿನಲ್‌ಹಿನ್ನಲೆಯುಳ್ಳು ವ್ಯಕ್ತಿ ವೇದಿಕೆ ಮೇಲೆ ಕಾಣಿಸಿಕೊಂಡಿದ್ದರ ಬಗ್ಗೆ ತನಿಖೆ ನಡೆಸುವಂತೆ ಸೂಕ್ತ ಕ್ರಮಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ಪತ್ರ ಬರೆದು ಸೂಚಿಸಿದ್ದಾರೆ. ಸಿದ್ದು ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿ.ಎಸ್.ಶಿವಣ್ಣ ಎಂಬ ವ್ಯಕ್ತಿ ಕ್ರಿಮಿನಲ್‌ಹಿನ್ನಲೆ ಉಳ್ಳವರಾಗಿದ್ದಾರೆ. ಇಂತಹವರು ಸಿಎಂ ಪದಗ್ರಹಣ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಭದ್ರತಾ ಲೋಪ ಮತ್ತು ಕಾನೂನು ಉಲ್ಲಂಘನೆ ಆಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಹೆಚ್.ವಿಶ್ವನಾಥ್‌ಪತ್ರ ಬರೆದಿದ್ದರು. ಎಚ್.ವಿಶ್ವನಾಥ್ ಪತ್ರದ ಆಧಾರ ಮೇಲೆ ಸಿಎಸ್‌ಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್‌ಚಂದ್‌ಗೆಹ್ಲೋಟ್‌ಅವರು, ಸೂಕ್ತ ತನಿಖೆಗೆ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *