ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವರುಣಾದಿಂದ ಸ್ಪರ್ಧಿಸುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಠಕ್ಕರ್‌ಕೊಡಲು ಬಿಜೆಪಿ ಮುಂದಾಗಿದೆ. ಲಿಂಗಾಯತ ಸಮುದಾಯದವರೇ ಹೆಚ್ಚಿರುವ ವರುಣಾದಿಂದ ಅದೇ ಸಮುದಾಯದ ಹಾಲಿ ಸಚಿವ ವಿ.ಸೋಮಣ್ಣ ಅವರ ಹೆಸರನ್ನು ಬಿಜೆಪಿ ಘೋಷಿಸಿದೆ. ಆ ಮೂಲಕ ಈ ಬಾರಿ ಚುನಾವಣೆಯಲ್ಲಿ ಈ ಕ್ಷೇತ್ರ ರಾಜಕೀಯವಾಗಿ ಹೆಚ್ಚು ಗಮನ ಸೆಳೆಯಲಿದೆ. ಸಿದ್ದು ವಿರುದ್ಧ ಯಡಿಯೂರಪ್ಪ ಪುತ್ರ ವಿಜಯೇಂದ್ರನನ್ನು ಕಣ್ಣಕ್ಕಿಳಿಸಲು ಬಿಜೆಪಿ ಹೈಕಮಾಂಡ್‌ಗ್ರೀನ್‌ಸಿಗ್ನಲ್‌ಕೊಟ್ಟಿತ್ತು. ಆದರೆ ಮಗನ ರಾಜಕೀಯ ಭವಿಷ್ಯ ಹಿತದೃಷ್ಟಿಯಿಂದ ವರುಣಾದಿಂದ ವಿಜಯೇಂದ್ರ ಸ್ಪರ್ಧೆಗೆ ಬಿಎಸ್‌ವೈ ವಿರೋಧ ವ್ಯಕ್ತಪಡಿಸಿದ್ದರು. ಈಗ ಸಿದ್ದು ವಿರುದ್ಧ ಸೆಣಸಲು ಸೋಮಣ್ಣ ಹುರಿಯಾಳಾಗಿದ್ದಾರೆ. ಬಿಜೆಪಿ ಪ್ಲ್ಯಾನ್‌ಯಶಸ್ವಿಯಾಗುತ್ತಾ? ಸ್ವಕ್ಷೇತ್ರ ಬಿಟ್ಟು ಸೋಮಣ್ಣ ಹೊರಗಿನ ಕ್ಷೇತ್ರದಲ್ಲಿ ಸ್ಪರ್ಧೆಗಿಳಿದಿದ್ದಾರೆ. ವರುಣಾದಲ್ಲಿ ಜಾತಿ ಮೇಲಾಟ ಸೋಮಣ್ಣ ಕೈ ಹಿಡಿಯಬಹುದೇ ಎಂಬ ಪ್ರಶ್ನೆ ಕೂಡ ಉದ್ಭವಿಸಿದೆ.