ವರುಣಾ ಕ್ಷೇತ್ರಕ್ಕೆ ಆಗಮಿಸಿರುವ ಶಿವಣ್ಣ, ಬೆಳಗ್ಗೆಯಿಂದಲೇ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪರವಾಗಿ ಮತಯಾಚನೆ ಮಾಡುತ್ತಿದ್ದರು. ಈ ಕುರಿತು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಬಿಜೆಪಿ ಅಭ್ಯರ್ಥಿ ಸೋಮಣ್ಣನನ್ನು ಹೊಗಳುವ ಮೂಲಕ ಶಿವಣ್ಣನಿಗೆ ಟ್ವೀಟ್ ಮಾಡಿ ಟಾಂಗ್ ನೀಡಿದ್ದಾರೆ. ‘ಪುನೀತ್ ರಾಜ್ ಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ. ಮನೆಮೆಚ್ಚಿ ಶ್ಲ್ಯಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕೆ ಇಳಿದ ಶಿವಣ್ಣ. ಅವರವರ ಭಾವ ಭಕುತಿಗೆ’ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.