ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಬಹಳಷ್ಟು ಜನ ನನ್ನನ್ನು ‘ಅನ್ನರಾಮಯ್ಯ’, ‘ರೈತರಾಮಯ್ಯ’, ‘ಕನ್ನಡ ರಾಮಯ್ಯ’, ‘ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಅದಕ್ಕೂ ಖುಷಿಪಡುವೆ ಸಿದ್ರಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಂ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ. ಗೋವಿಂದ ಭಟ್ಟರ ಶಿಷ್ಯರಾದ ಶಿಶುನಾಳ ಷರೀಪ್, ಸಂತ ರಮಾನಂದರ ಶಿಷ್ಯರಾದ ಕವಿ ಕಬೀರರ ಪರಂಪರೆ ನಮ್ಮದು. ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಶಾಸಕ ಸಿ.ಟಿ ರವಿ ಮತ್ತು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.