ಸುದೀಪ್ ಕಬ್ಜ ಸಿನಿಮಾದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಸುಳ್ಳು- ಆರ್ ಚಂದ್ರು 

ಸುದೀಪ್ ಚಿತ್ರತಂಡದೊಂದಿಗಿನ ಮನಸ್ತಾಪದಿಂದಾಗಿ ಚಿತ್ರದಿಂದ ಹೊರಬಂದಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದೆ.  ಈ ಸುದ್ದಿ ಸತ್ಯಕ್ಕೆ ದೂರವಾದುದು. ಕಿಚ್ಚ ಸುದೀಪ್ ಅವರು ಈಗಾಗಲೇ ಕಬ್ಜ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ದಯವಿಟ್ಟು ಈ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ಇದಕ್ಕೀಗ ನಿರ್ದೇಶಕ ಆರ್. ಚಂದ್ರು ಸ್ಪಷ್ಟನೆ ನೀಡಿದ್ದಾರೆ.