ಸ್ತ್ರೀಶಕ್ತಿ ಸಂಘಗಳ ಮಾದರಿಯಲ್ಲಿ ಯುವಕರು ಸ್ವ ಉದ್ಯೋಗ ರೂಪಿಸಿಕೊಳ್ಳಲು ‘ಸ್ವಾಮಿ ವಿವೇಕಾನಂದ ಯುವ ಶಕ್ತಿ ಸಂಘ ಯೋಜನೆಗೆ’ ಮಾ.23ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.ಭಾನುವಾರ ಸಚಿವ ನಾರಾಯಣಗೌಡ ಅವರ ಜತೆ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಘಗಳ ರಚನೆಯ ಪ್ರಗತಿ ಕುರಿತು ಅವರು ಮಾಹಿತಿ ಪಡೆದರು.ಬ್ಯಾಂಕ್ನಿಂದ ಸಾಲ ಸೌಲಭ್ಯ ಪಡೆದು ಉದ್ದಿಮೆಯನ್ನು ಸ್ಥಾಪಿಸಿ ಉತ್ಪಾದನೆ ಪ್ರಾರಂಭಿಸುವವರೆಗೂ ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾ ಪಂಚಾಯತ್ಸಿಇಓಗಳಿಗೆ ಸಚಿವರು ಸೂಚಿಸಿದರು.ಯುವಕರು ಕೈಗೊಳ್ಳುವ ಯೋಜನೆಗೆ ಅನುಗುಣವಾಗಿ ಆಯಾ ಕ್ಷೇತ್ರದ ಪರಿಣತರಿಂದಲೇ ತರಬೇತಿ ಕೊಡಿಸಬೇಕು. ಆಗ ಮಾತ್ರ ಯೋಜನೆ ಯಶಸ್ವಿಯಾಗಲು ಸಾಧ್ಯ ಎಂದು ತಿಳಿಸಿದರು.ಯುವಶಕ್ತಿ ಸಂಘಗಳಿಗೆ ಸಾಲ ನೀಡುವಾಗ, ಯೋಜನಾ ಮೊತ್ತ ಹೆಚ್ಚಾಗಿದ್ದು ಯೋಜನೆ ಲಾಭದಾಯಕವಾಗಿದ್ದರೆ ಬ್ಯಾಂಕುಗಳು ಸರ್ಕಾರ ನಿಗದಿಪಡಿಸಿದ 5 ಲಕ್ಷ ರು. ಮಿತಿಗಿಂತ ಹೆಚ್ಚಿನ ಮೊತ್ತದ ಸಾಲ ಮಂಜೂರು ಮಾಡಿ ಯುವಕರನ್ನು ಬೆಂಬಲಿಸಬೇಕೆಂದು ಮುಖ್ಯಮಂತ್ರಿಗಳು ಬ್ಯಾಂಕರ್ಗಳಿಗೆ ಸಲಹೆ ನೀಡಿದರು.