ಸ್ನೈಪರ್‌ಬಳಸಿ ದಾಳಿ ಪಾಕ್‌ನಲ್ಲಿ ಉಗ್ರರ ದಾಳಿಗೆ 10 ಮಂದಿ ಪೊಲೀಸ್‌ಅಧಿಕಾರಿಗಳು ಬಲಿ

ಪಾಕಿಸ್ತಾನದ ದೇರಾ ಇಸ್ಮಾಯಿಲ್ ಖಾನ್‌ನಗರದಲ್ಲಿರುವ ಚೋಡ್ವಾನ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಉಗ್ರರು ಪೊಲೀಸ್‌ಠಾಣೆ ಮೇಲೆ ಸ್ನೈಪರ್‌ಗಳಿಂದ ಗುಂಡಿನ ದಾಳಿ ನಡೆಸಿ ಠಾಣೆಯೊಳಗೆ ನುಗ್ಗಿದ್ದಾರೆ. ಪೊಲೀಸ್‌ಠಾಣೆ ನುಗ್ಗಿದ ಬಳಿಕ ಹ್ಯಾಂಡ್ ಗ್ರೆನೇಡ್‌ಗಳನ್ನು ಬಳಸಿ ದಾಳಿ ನಡೆಸಿದ್ದಾರೆ. ಇದರಿಂದ 10 ಮಂದಿ ಪೊಲೀಸ್‌ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.ಪೊಲೀಸ್‌ಠಾಣೆಯಲ್ಲಿ ನಡೆದ ಉಗ್ರರ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟವಾಗಿಲ್ಲ. ಇದೇ ಫೆಬ್ರವರಿ 8 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನವೇ ಉಗ್ರರ ದಾಳಿ ನಡೆದಿರುವುದು ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

Leave a Reply

Your email address will not be published. Required fields are marked *