ದೇಶವು ಪ್ರತಿದಿನ ಸರಾಸರಿ 15,000 ಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸುತ್ತಲೇ ಇರುವುದರಿಂದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಪ್ರಮುಖ ಸೂಚನೆಗಳನ್ನು ನೀಡಿದೆ. ಸ್ವಾತಂತ್ರ್ಯ ದಿನಾಚರಣೆಗೆ ಯಾವುದೇ ದೊಡ್ಡ ಕಾರ್ಯಕ್ರಮಗಳನ್ನು ನಡೆಸದಂತೆ ತಿಳಿಸಿದೆ. ಪ್ರತಿಯೊಬ್ಬರೂ ಕೋವಿಡ್ ಪ್ರೋಟೋಕಾಲ್ಗಳನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರಕಾರ ರಾಜ್ಯಗಳಿಗೆ ತಿಳಿಸಿದೆ.