ಖಾಸಗಿ ಸುದ್ದಿ ವಾಹಿನಿ ‘ರಿಪಬ್ಲಿಕ್’ ಆಯೋಜಿಸಿದ್ದ ಶೃಂಗದಲ್ಲಿ ಭಾಗಿಯಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ತಡೆಗಟ್ಟಿ, ಕೆಲವರು ಹಣ ಮಾಡಿಕೊಳ್ಳುವ ಅವಕಾಶವನ್ನು ಮುಚ್ಚಿಹಾಕಿದ್ದರಿಂದ ಹಲವರು ನನ್ನ ವಿರುದ್ಧ ಮಾತನಾಡುತ್ತಿದ್ದಾರೆ, ನಿಂದಿಸುತ್ತಿದ್ದಾರೆ. ನನ್ನ ಮೇಲೆ ಕೆಲವರು ಕೋಪಗೊಂಡಿದ್ದಾರೆ’ ಹಲವರು ಭ್ರಷ್ಟಚಾರದಲ್ಲಿ ತೊಡಗಿದ್ದರು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇವುಗಳಿಗೆ ಕಡಿವಾಣ ಹಾಕಲಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.