ಹಿಂದುಗಳ ಗುರುತಿನಲ್ಲಿ ಸ್ಫೋಟ ನಡೆಸಲು ಪ್ಲಾನ್ ಮಾಡಿದ್ದಾರೆ ಹಿಂದೂ ಸಂಘಟನೆಗಳನ್ನು ಟಾರ್ಗೆಟ್ ಮಾಡಲಾಗ್ತಿದ್ದು, ದೇವರ ದಯೆಯಿಂದ ಇದು ಸಾಧ್ಯವಾಗಲಿಲ್ಲ: ಸಿಟಿ ರವಿ

ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ವಿಚಾರಕ್ಕೆ ಪ್ರತಿಕ್ರಿಯಿಸಿ, ದೇವರು ನಮ್ಮ ಕಡೆಗೆ ಇದ್ದಾನೆ. ಹಿಂದೆಯೂ ಹಿಂದೂಗಳ ವಿರುದ್ಧ ಕ್ರಿಶ್ಚಿಯನ್‍ರನ್ನ ಎತ್ತಿಕಟ್ಟುವ ಪ್ರಯತ್ನ ನಡೆದಿತ್ತು. ಈಗ ಕೊಯಮತ್ತೂರು ಬಳಿಕ ಕರ್ನಾಟಕದಲ್ಲಿ ಸ್ಫೋಟ ವಿಫಲವಾಗಿದೆ. ಹಿಂದುಗಳು ಗುರುತಿನಲ್ಲಿ ಸ್ಫೋಟ ನಡೆಸಲು ಪ್ಲಾನ್ ಮಾಡಿದ್ದಾರೆ. ಇದನ್ನೇ ಆಧರಿಸಿ ಕೆಲವು ರಾಜಕಾರಣಿಗಳು ಹಿಂದೂಗಳ ತಲೆಗೆ ಕಟ್ಟುವ ಪ್ರಯತ್ನ ನಡೆದು ಬಿಟ್ಟಿತ್ತು. ಹಿಂದೂ ಸಂಘಟನೆಗಳನ್ನು ಟಾರ್ಗೆಟ್ ಮಾಡಲಾಗುತ್ತಿತ್ತು. ದೇವರ ದಯೆಯಿಂದ ಇದು ಸಾಧ್ಯವಾಗಲಿಲ್ಲ ನಾನು ಸಿಎಂ ಜೊತೆಗೆ ವೈಯಕ್ತಿಕವಾಗಿ ಮಾತನಾಡಿ ಎನ್‍ಐಎಗೆ ನೀಡಲು ಆಗ್ರಹಿಸಿದ್ದೇನೆ. ಇದನ್ನು ಲಘುವಾಗಿ ಪರಿಗಣಿಸಬಾರದು. ಇದರ ಹಿಂದೆ ಜಿಹಾದಿ ಮಾನಸಿಕತೆ ಇದೆ. ದೊಡ್ಡ ಷಡ್ಯಂತ್ರ ನಡೆದಿರುವ ಸಾಧ್ಯತೆ ಇದೆ. ಸ್ಫೋಟಕ್ಕೆ ಖಚ್ಚಾ ವಸ್ತುಗಳನ್ನು ಯಾರು ನೀಡುತ್ತಿದ್ದಾರೆ ಎನ್ನುವುದು ಪತ್ತೆಯಾಗಬೇಕಿದೆ ಎಂದರು.

Leave a Reply

Your email address will not be published. Required fields are marked *