ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂ ಪದ ಅಶ್ಲೀಲ ಅಂತಾ ಇದ್ದಿದ್ದು ಆ ಡಿಕ್ಷನರಿಯಲ್ಲಿ ಇದೆ. ಆ ಡಿಕ್ಷನರಿ 1963ರಲ್ಲಿ ಪ್ರಿಂಟ್ ಆಗಿದೆ. ಇವರು ತಮಗೆ ಬೇಕಾದ ಹಾಗೇ ಹೇಳಿದರೆ ನಾನು ಹೇಗೆ ಉತ್ತರ ಕೊಡಬೇಕಾಗುತ್ತದೆ. ವಿಕಿಪೀಡಿಯಾದಲ್ಲಿ ಇದ್ದಿದ್ದನ್ನು ಹೇಳಿದ್ದೇನೆ. ಅದನ್ನು ನೋಡಿ ಇಡೀ ರಾಷ್ಟ್ರದಲ್ಲಿ ಮುಂದುವರಿಸಿದ್ದಾರೆ. ಹಿಂದೂ ಪದದ ಬಗ್ಗೆ ನಾನು ತಪ್ಪು ಮಾತನಾಡಿದ್ದೇನೆ ಅಂತಾ ಪ್ರೂವ್ ಮಾಡಿದರೆ ಕ್ಷಮೆಯಷ್ಟೇ ಅಲ್ಲ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.