ಹಿಂದೂ ಪದ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಜಾರಕಿಹೊಳಿ!

ಹಿಂದು ಪದ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ನೈಜತೆ ಬಿಟ್ಟು ಆ ವಿಚಾರವನ್ನು ತಿರುಚಿ ಅಪಪ್ರವಾರ ಮಾಡಿ ಗೊಂದಲ ಸೃಷ್ಟಿಸಲಾಗಿದೆ. ಹೇಳಿಕೆಯಲ್ಲಿ ಯಾವುದೇ ವಿವಾದ ಇಲ್ಲ. ಕಾಂಗ್ರೆಸ್‌ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗಲ್ಲ. ನನ್ನ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಜಾರಕಿಹೊಳಿ ತಿಳಿಸಿದರು. ಈ ವಿಷಾದದ ಹಿಂದೆ ಕಾಂಗ್ರೆಸ್ ಹೈಕಮಾಂಡ್ ನಿಂದಲೇ ಒತ್ತಡವಿತ್ತು ಎಂದು ಉನ್ನತ ಮೂಲಗಳು ತಿಳಿಸಿವೆ

Leave a Reply

Your email address will not be published. Required fields are marked *