ಹಿಜಬ್‌ಪ್ರಕರಣ ಸುಪ್ರೀಂ ಕೋರ್ಟ್‌ನಿಂದ ಭಿನ್ನ ತೀರ್ಪು ಪ್ರಕಟವಾಗಿದ್ದು, ಅರ್ಜಿ ತ್ರಿಸದಸ್ಯ ಪೀಠ ಅಥವಾ ಸಂವಿಧಾನ ಪೀಠದಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ. ನ್ಯಾ. ಹೇಮಂತ್‌ಗುಪ್ತಾ ಅವರು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದರೆ ನ್ಯಾ. ಸುಧಾಂಶು ಧೂಲಿಯಾ ಅವರು ಕರ್ನಾಟಕ ಹೈಕೋರ್ಟ್‌ಆದೇಶವನ್ನು ವಜಾಗೊಳಿಸಿದ್ದಾರೆ. ಇಬ್ಬರು ನ್ಯಾಯಮೂರ್ತಿಗಳಿಂದ ಭಿನ್ನವಾದ ತೀರ್ಪು ಪ್ರಕಟವಾದ ಹಿನ್ನೆಲೆ ಈ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆಯಾಗಲಿದೆ.