ಸೆಪ್ಟೆಂಬರ್ 26ರಂದು ರಾಷ್ಟ್ರಪತಿ ದ್ರೌಪದಿಮುರ್ಮು ಅವರು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಅವರು ಮಾಹಿತಿ ನೀಡಿದ್ದಾರೆ. ರಾಷ್ಟ್ರಪತಿಯವರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಅವರಿಗೆ ನೆನಪಿನ ಕಾಣಿಕೆಯಾಗಿ ಸಿದ್ಧಾರೂಢರ 1.5 ಕೆ.ಜಿ ಬೆಳ್ಳಿಯ ಮೂರ್ತಿಯನ್ನು ನೀಡಲಾಗುತ್ತದೆ.