ಹೆಚ್‌ ಡಿ ಕುಮಾರಸ್ವಾಮಿ ಇಂದು ತಮ್ಮ ದಳದ ಬಗ್ಗೆ ಮಾತನಾಡುತ್ತಿಲ್ಲ ಬಿಜೆಪಿ ವಕ್ತಾರರಾಗಿದ್ದಾರೆ: ಡಿಕೆ ಶಿವಕುಮಾರ್‌

ಕುಮಾರಸ್ವಾಮಿ ಇಂದು ತಮ್ಮ ದಳದ ಬಗ್ಗೆ ಮಾತನಾಡುತ್ತಿಲ್ಲ. ಬಿಜೆಪಿ ವಕ್ತಾರರಾಗಿದ್ದಾರೆ. ಬರೀ ಬಿಜೆಪಿಯ ಸುದ್ದಿ ಮಾತನಾಡುತ್ತಿದ್ದಾರೆ. ಅಂದರೆ ಅವರ ಸ್ಥಿತಿ ಈಗ ಏನಾಗಿರಬೇಕು? ಪಕ್ಷದಲ್ಲಿರುವ ಶಾಸಕರು ಏನಾಗಬಹುದು ಎಂಬ ಚಿಂತೆಯಲ್ಲಿ ಬಿಜೆಪಿ ತಬ್ಬಿಕೊಂಡಿದ್ದಾರೆ. ಅವರ ಮೈತ್ರಿ ಬಗ್ಗೆ ಈಗ ನಾನೇನು ಹೇಳುವುದಿಲ್ಲ. ಚುನಾವಣೆ ಮುಗಿಯಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.ಬಿಜೆಪಿಗೆ ಸುಳ್ಳೇ ಮನೆದೇವರು. ಯಾವುದೇ ದೊಡ್ಡ ಕಾರ್ಯಕ್ರಮವನ್ನು ತರುವಲ್ಲಿ ಅವರಿಂದ ಸಾಧ್ಯವಿಲ್ಲ. ಬಿಡಿಗಾಸು ಸಹ ಅವರಿಂದ ರಾಜ್ಯಕ್ಕೆ ದೊರೆಯುತ್ತಿಲ್ಲ. ಜನರ ಮನದಲ್ಲಿ ಉಳಿಯುವ ಕಾರ್ಯಕ್ರಮವನ್ನು ಬಿಜೆಪಿ ನೀಡಿದ್ದೆ ಆದಲ್ಲಿ ನಾನು ಅವರಿಗೆ ಶರಣಾಗಲು ಸಿದ್ಧ ಎಂದರು.


Leave a Reply

Your email address will not be published. Required fields are marked *