ಮತದಾನಕ್ಕೆ ಎರಡೇ ದಿನಗಳು ಬಾಕಿ ಉಳಿದಿವೆ. ಮೇ 10ರಂದು ಮತದಾನ ನಡೆಯಲಿದೆ. ಇದೀಗ ಕೊನೆಯ ದಿನದ ಪ್ರಚಾರದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಮತ್ತೊಂದು ಗ್ಯಾರಂಟಿ ಭರವಸೆಯನ್ನು ಘೋಷಿಸಿದ್ದಾರೆ.ಬೆಂಗಳೂರಿನ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಅವರು “ಈ ರಾಜ್ಯಕ್ಕೆ ಒಳ್ಳೆಯ ಸರ್ಕಾರ ಕೊಡ್ತೀವಿ. ರೈತರಿಗಾಗಿ ಎಷ್ಟು ಸಾಧ್ಯವೋ ಅಷ್ಟು ಕೆರೆಗಳನ್ನು ತುಂಬಿಸುತ್ತೇವೆ. ಹೆಣ್ಣುಮಕ್ಕಳಿಗಾಗಿ ಪ್ರತಿ ತಾಲೂಕಿನಲ್ಲೂ ತಾಯಿ-ಮಗು ಆಸ್ಪತ್ರೆಯನ್ನು ಹೊಸದಾಗಿ ನಿರ್ಮಿಸಿ, ಉಚಿತವಾಗಿ ಹೆರಿಗೆ ಸೌಲಭ್ಯ ಸಿಗುವಂತೆ ಮಾಡುತ್ತೇವೆ,” “ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಎಲ್ಲರನ್ನೂ ಸಮಾನತೆಯಿಂದ ನೋಡುತ್ತೇವೆ. ಮಕ್ಕಳಿಗೆ ಗ್ರಾಮೀಣ ಭಾಗದಲ್ಲೇ ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಿ, ಬೆಂಗಳೂರಿನಂತಹ ನಗರಗಳಿಗೆ ಬರುವುದನ್ನು ತಪ್ಪಿಸುತ್ತೇವೆ,” ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.