ಹೊತ್ತಿ ಉರಿಯುತ್ತಿದೆ ಫ್ರಾನ್ಸ್, ಸಿಕ್ಕಸಿಕ್ಕಲ್ಲಿ ದೊಂಬಿ, ಗಲಭೆ, ಲೂಟಿ, ಕಂಡಕಂಡಲ್ಲಿ ಬೆಂಕಿ- ಭದ್ರತೆಗೆ 45 ಸಾವಿರ ಪೊಲೀಸರ ನಿಯೋಜನೆ,

ಪ್ಯಾರಿಸ್ ಬಳಿ ನಹೆಲ್ ಎಂಬ 17 ವರ್ಷದ ಯುವಕನ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ಮಾರಣಾಂತಿಕವಾಗಿ ಗುಂಡು ಹಾರಿಸಿದ್ದಾರೆ. ಮಂಗಳವಾರ ಬೆಳಗ್ಗೆ ನೆಲ್ಸನ್ ಮಂಡೇಲಾ ಸ್ಕ್ವೇರ್ ಬಳಿಯ ಟ್ರಾಫಿಕ್ ಸ್ಟಾಪ್‌ನಲ್ಲಿ ನಹೆಲ್ ಕಾರನ್ನು ಓಡಿಸುತ್ತಿರುವುದನ್ನು ಫ್ರೆಂಚ್ ಪೊಲೀಸರು ಗುರುತಿಸಿದ್ದಾರೆ. ಅವರು ಸೈರನ್ ಮತ್ತು ಲೈಟ್‌ಗಳ ಸಹಾಯದಿಂದ ಕಾರನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ, ನೆಹಾಲ್‌ಪಾದಚಾರಿಗಳ ಜೀವಕ್ಕೆ ಅಪಾಯವನ್ನುಂಟು ಮಾಡುತ್ತಾನೆಂದು ಭಾವಿಸಿ ಪೊಲೀಸ್‌ಅಧಿಕಾರಿ ಗುಂಡು ಹಾರಿಸಿದ್ದಾರೆ. ಎದೆಗೆ ಗುಂಡು ತಗುಲಿ ನೆಹಲ್ ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾನೆ. ಮುಸ್ಲಿಂ ಸಮುದಾಯದಕ್ಕೆ ಸೇರಿರುವ ನಹೆಲ್‌ನ ಧರ್ಮವೇ ಆತನ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಪ್ರತಿಭಟನಾಕಾರರು ಆಕ್ರೋಶಗೊಂಡಿದ್ದಾರೆ. ಫ್ರಾನ್ಸ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಪೊಲೀಸ್ ತಾರತಮ್ಯದ ಬಗ್ಗೆ ಆತನ ಹತ್ಯೆ ತಿಳಿಸಿಕೊಡುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ..ಪ್ರತಿಭಟನೆ ಮತ್ತು ಲೂಟಿ ಸೇರಿದಂತೆ ಹಲವಾರು ಹಿಂಸಾತ್ಮಕ ಘಟನೆಗಳು ಫ್ರಾನ್ಸ್‌ನಾದ್ಯಂತ ಸಂಭವಿಸುತ್ತಿವೆ. ಜನರು ಬೀದಿಗಿಳಿದು ಸಿಕ್ಕಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚುವ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಈ ದೃಶ್ಯಗಳು ನೋಡುವುದಕ್ಕೇ ಭಯಾನಕವಾಗಿವೆ. ಉದ್ರಿಕ್ತರ ಗುಂಪು ನಾಲ್ಕನೇ ದಿನವೂ ಲೂಟಿಗಿಳಿದಿದೆ.ಪೊಲೀಸರೊಂದಿಗೆ ಬಡಿದಾಟ, ಅಂಗಡಿ, ಶಾಪಿಂಗ್‌ಮಾಲ್‌ಗಳಿಗೆ ಬೆಂಕಿ ಹಚ್ಚುವುದು ಸರ್ವೇಸಾಮಾನ್ಯವಾಗಿದೆ. ಪ್ರೇಮನಗರಿ ಪ್ಯಾರಿಸ್‌ನಲ್ಲಿ ಅಶಾಂತಿ ಹರಡಿಕೊಂಡಿದೆ. ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಲಾಗುತ್ತಿದೆ. ಪ್ರತಿದಿನ ಪರಿಸ್ಥಿತಿ ಹದಗೆಡುತ್ತಲೇ ಇದೆ..

Leave a Reply

Your email address will not be published. Required fields are marked *