ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ ದಲ್ಲಿ ಭಾರತ ಇಂಧನ ಸಪ್ತಾಹ 2023ಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ, ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಜಿ-20 ಅಧ್ಯಕ್ಷತೆ ದೊರೆತ ನಂತರ ನಡೆಯುತ್ತಿರುವ ಮೊದಲ ಕಾರ್ಯಕ್ರಮ ಇದಾಗಿದೆ. ಅತ್ಯಂತ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆ ಭಾರತದ್ದಾಗಿದೆ. ಹೊರಗಿನ ಪರಿಸ್ಥಿತಿಗಳು ಏನೇ ಇರಲಿ, ಆಂತರಿಕವಾಗಿ ಭಾರತ ಗಟ್ಟಿಯಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ ಎಲ್ಲ ಕುಟುಂಬಗಳಲ್ಲಿ ಸೋಲಾರ್ ಒಲೆಗಳು ಬಳಕೆಗೆ ಬರಲಿವೆ. ಇದರಿಂದ ಇಂಧನ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಆಗಲಿದೆ. ಭಾರತದಲ್ಲಿ ಇಂಧನ ಕ್ಷೇತ್ರದಲ್ಲಿರುವ ಅವಕಾಶಗಳನ್ನು ಗಮನಿಸಿ, ಬಳಸಿಕೊಳ್ಳಿ. ನಿಮ್ಮ ಹೂಡಿಕೆಗೆ ಭಾರತವು ಅತ್ಯಂತ ಪ್ರಶಸ್ತ ತಾಣವಾಗಿದೆ. ಸದೃಢ ಸರ್ಕಾರ, ನಿರಂತರ ಪರಿವರ್ತನೆ, ತಳಮಟ್ಟದಲ್ಲಿ ಸಾಮಾಜಿಕ ಆರ್ಥಿಕ ಪ್ರಾಬಲ್ಯ ಭಾರತವನ್ನು ಗಟ್ಟಿಯಾಗಿ ಇಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.