ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ನಡೆದ ಉಗ್ರರ ದಾಳಿಯು ಅನಾಗರಿಕ ಭಯೋತ್ಪಾದಕ ಕೃತ್ಯ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬೇಸರ ಹೊರಹಾಕಿದ್ದಾರೆ. ರಕ್ತಸಿಕ್ತ, ಬರ್ಬರ ಭಯೋತ್ಪಾದಕ ಕೃತ್ಯಕ್ಕೆ ಸಂಬಂಧಿಸಿದಂತೆ ನಾನು ಇಂದು ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ದಾಳಿಯಲ್ಲಿ ಅಮಾಯಕರು, ಶಾಂತಿಪ್ರಿಯ ಜನರು ಬಲಿಯಾಗಿದ್ದಾರೆ. ನಾನು ಮಾ.24 ಅನ್ನು ರಾಷ್ಟ್ರೀಯ ಶೋಕಾಚರಣೆಯ ದಿನವೆಂದು ಘೋಷಿಸುತ್ತೇನೆ ಎಂದು ಪುಟಿನ್ ದೂರದರ್ಶನದ ಭಾಷಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ತಿಳಿಸಿದ್ದಾರೆ