ಕಾಂಗ್ರೆಸ್‌ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಇಸ್ಲಾಮಿಕ್‌ಮತಾಂಧರು ತಲೆ ಎತ್ತುತ್ತಿದ್ದಾರೆ: ಸರ್ಕಾರದ ವಿರುದ್ಧ ಜೋಶಿ ವಾಗ್ದಾಳಿ

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸುದ್ದಿಗಾರರ ಜತೆಗೆ ಮಾತನಾಡಿ, ಶಿವಮೊಗ್ಗ ಘಟನೆಯನ್ನು ನಾವು ಖಂಡಿಸುತ್ತೇವೆ. ಕಾಂಗ್ರೆಸ್‌ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಇಸ್ಲಾಮಿಕ್‌ಮತಾಂಧರು ತಲೆ ಎತ್ತುತ್ತಿದ್ದಾರೆ. ಕೋಲಾರ, ಶಿವಮೊಗ್ಗದಲ್ಲಿ ಗಲಾಟೆ ಆದರೂ ಗೃಹ ಸಚಿವರು ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್‌ಸರ್ಕಾರದ ಅವಧಿಯಲ್ಲಿ ಇಂಥ ಘಟನೆಗಳು ಸಾಮಾನ್ಯವಾಗುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ಸರ್ಕಾರದ ಮೊದಲ ಅವಧಿಯಲ್ಲಿ ಟಿಪ್ಪು ಸುಲ್ತಾನ್‌ಹಾಗೂ ಎರಡನೇ ಅವಧಿಯಲ್ಲಿ ಔರಂಗಜೇಬ್‌ನನ್ನು ಮೆರೆಸಲಾಗುತ್ತಿದೆ. ಇದರ ಹಿಂದೆ ಕಾಂಗ್ರೆಸ್‌ನ ತುಷ್ಟೀಕರಣದ ಪರಾಕಷ್ಟೆ ಅಡಗಿದೆ ಎಂಬ ಅರಿವು ನಮಗಿದೆ ಎಂದರು.

Leave a Reply

Your email address will not be published. Required fields are marked *