ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆ ರದ್ದಾಗುತ್ತದೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟ ಇಲ್ಲ ಅಂತ ಅರ್ಥ. ಹಾಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ. ನಿಮ್ಮ ಮತ ಅಕ್ಷತೆ ಕಾಳಿಗಾ ಅಥವಾ ಐದು ಗ್ಯಾರಂಟಿಗಾ ಯೋಚನೆ ಮಾಡಿ. ಈ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದ್ರೆ ಗ್ಯಾರಂಟಿ ಯೋಜನೆ ಮುಂದುವರಿಸುತ್ತೇವೆ. ಒಂದು ವೇಳೆ ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದೀರಿ ಅಂತ ಅಲ್ವಾ.ಎಂಬ ಶಾಸಕ ಬಾಲಕೃಷ್ಣ ಅವರ ವಿವಾದಿತ ಹೇಳಿಕೆಗೆ ವಿವರಣೆ ನೀಡಿ ತೇಪೆ ಹಚ್ಚಿದ್ದಾರೆ. ಲೋಕಸಭಾ ಚುನಾವಣೆ ಆದ ಮೇಲೆ ಗ್ಯಾರಂಟಿ ಯೋಜನೆ ಕೊಡಲ್ಲ ಎಂಬುದನ್ನು ಬಾಲಕೃಷ್ಣ ಹೇಳಿರೋದಲ್ಲ. ಬಿಜೆಪಿಯವರು ಹಾಗೆ ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ರದ್ದು ಮಾಡ್ತಾರೆ ಎಂದು ಬಿಜೆಪಿಯವರು ಹೇಳಿದ್ದಾರೆ. ನೀವು ಎಚ್ಚರಿಕೆಯಿಂದ ಇರಿ ಎಂದು ಬಾಲಕೃಷ್ಣ ಹೇಳಿದ್ದಾರೆ ಅಷ್ಟೇ ಎಂದು ಸಮಜಾಯಿಷಿ ನೀಡಿದ್ದಾರೆ. ಗ್ಯಾರಂಟಿ ಯೋಜನೆ ಕರ್ನಾಟಕದಲ್ಲಿ ರದ್ದು ಮಾಡೋದಿಲ್ಲ. ರಾಜ್ಯದಲ್ಲಿ 5 ವರ್ಷ ಗ್ಯಾರಂಟಿ ಯೋಜನೆ ಇರಲಿದೆ ಎಂದು ಅವರು ಭರವಸೆ ನೀಡಿದ್ದಾರೆ.