ಸೋಲಿನ ಭಯದಲ್ಲಿ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬ್ರಿಟಿಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ ಹುತಾತ್ಮರಾದ, ಜೈಲು ಸೇರಿದ ಚರಿತ್ರೆ ಕಾಂಗ್ರೆಸ್ಕ್ಕೆ ಇದೆ. ಬಿಜೆಪಿ ನಮಗೆ ಎಷ್ಟೇ ತೊಂದರೆ ಕೊಟ್ಟರೂ ಕಾಂಗ್ರೆಸ್ ಕಾರ್ಯಕರ್ತರು ಹೋರಾಟದ ಹಾದಿಯಲ್ಲೇ ಎಲ್ಲವನ್ನೂ ಎದುರಿಸಲಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ