ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬೃಹತ್ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜಾಗಗಳನ್ನು ಒತ್ತುವರಿ ಮಾಡಿಕೊಂಡವರು ಎಷ್ಟೇ ಪ್ರಭಾವಿಗಳಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಸದಸ್ಯ ಮುನಿರತ್ನ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಈವರೆಗೆ ಆಡಳಿತ ನಡೆಸಿರುವ ಎಲ್ಲ ಸರ್ಕಾರಗಳು ಸರ್ಕಾರಿ ಜಮೀನುಗಳ ಅತಿಕ್ರಮಣ ತೆರವು ಮಾಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿಕೊಂಡು ಬಂದಿವೆ. ಕಾಂಗ್ರೆಸ್ಸರ್ಕಾರವು ಸಹ ಒತ್ತುವರಿ ತೆರವುಗೊಳಿಸುವುದನ್ನು ಸಹಿಸುವುದಿಲ್ಲ. ಒತ್ತುವರಿ ಮಾಡುವವರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.ಈಗಾಗಲೇ ಮ್ಯಾಪಿಂಗ್ಮಾಡುವ ಕೆಲಸ ಮಾಡಲಾಗುತ್ತಿದೆ. ಒತ್ತುವರಿಯಾದರೆ ಇದರಲ್ಲಿ ಗೊತ್ತಾಗಲಿದೆ. ಕೆಲವು ಒತ್ತುವರಿ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಜನತೆಯ ಉಪಯೋಗವಾಗುವಂತಹ ಪ್ರದೇಶಗಳನ್ನು ಒತ್ತುವರಿಯಾದರೆ ಕ್ರಮ ಕೈಗೊಳ್ಳಲಾಗುವುದು. ಒತ್ತುವರಿ ತೆರವು ಕೆಲಸವನ್ನು ಕೈಗೊಳ್ಳುತ್ತೇವೆ ಎಂದರು. ಮುನಿರತ್ನ ಮಾತನಾಡಿ, ತಮ್ಮ ಕ್ಷೇತ್ರದದಲ್ಲಿ ವಾರ್ಡ್ನಂ.73 ಮತ್ತು ಪ್ರಮೋದ್ಲೇಔಟ್ನಲ್ಲಿ ಒತ್ತುವರಿ ನಡೆದಿದೆ. ಇಲ್ಲಿ ತೆರವುಗೊಳಿಸಿದರೆ ಪ್ರಭಾವಿ ವ್ಯಕ್ತಿಗಳ ಹೆಸರನ್ನು ಪ್ರಸ್ತಾಪಿಸಲಾಗುತ್ತದೆ ಎಂದು ಹೇಳಿದರು. ಆಗ ಡಿ.ಕೆ.ಶಿವಕುಮಾರ್, ನಿಮಗಿಂತ ಪ್ರಭಾವಿಗಳಿದ್ದಾರೆಯೇ ಎಂದು ಕಾಲೆಳೆದರು.