ನಗರದ ಅರಮನೆ ಮೈದಾನದಲ್ಲಿ ಮಂಗಳವಾರ ಮುನಿಸಿಪಾಲಿಕಾ-2023 ಉದ್ಘಾಟನೆ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ. ಆದರೆ, ಅಂತಿಮ ತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ ಎಂದು ತಿಳಿಸಿದರು. ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆದಿರುವುದನ್ನು ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೊರೆ ಹೋಗಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿ ಸರ್ಕಾರ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ಕಾನೂನು ಬಾಹಿರವಾಗಿದ್ದು, ಆದೇಶವನ್ನು ವಾಪಸ್ ಪಡೆಯಲಾಗಿದೆ. ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದ ನೇಮಕಾತಿ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಅಸಮಾಧಾನಗೊಂಡಿರುವ ಬಗ್ಗೆ, ‘ನಿಗಮ-ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ಯಾರ ಅಭಿಪ್ರಾಯವನ್ನು ಪಡೆಯಲಾಗಿಲ್ಲ’ ಎಂದಷ್ಟೇ ಹೇಳಿದರು.