ಸೆಪ್ಟೆಂಬರ್ 2 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ-L1 ಏಳು ಪೇಲೋಡ್ಗಳೊಂದಿಗೆ ಉಡಾವಣೆಗೊಂಡಿತ್ತು. ಭೂಮಿಯಿಂದ ಸುಮಾರು 15 ಲಕ್ಷ ಕಿಮೀ ದೂರದಲ್ಲಿರುವ L1 ಪಾಯಿಂಟ್ಕಡೆಗೆ ಭೂ ಕಕ್ಷೆಯಿಂದ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿತ್ತು. ಶನಿವಾರ ಬೆಳಗ್ಗಿನಿಂದಲೇ ಹಾಲೋ ಆರ್ಬಿಟ್ ಅಳವಡಿಕೆಯ ಕಾರ್ಯವನ್ನು ಮುಂದುವರಿಸಿ ಲಗ್ರೇಂಜ್ಪಾಯಿಂಟ್-1 ರಲ್ಲಿ ಇರಿಸಲು ಪ್ರಾರಂಭಿಸಿತ್ತು. ಅಂದುಕೊಂಡಂತೆ ಆದಿತ್ಯ ಎಲ್ನೌಕೆಯು ನಿಗದಿತ ಕಕ್ಷೆ ತಲುಪಿದ್ದು, ದೊಡ್ಡ ಯಶಸ್ಸು ತಂದುಕೊಟ್ಟಿದೆ. 2023ರ ಚಂದ್ರಯಾನ-3 ಯಶಸ್ವಿ ಬಳಿಕ ಇಸ್ರೋ ಸ್ಥಾಪಿಸಿದ ಮಹತ್ವದ ಮೈಲುಗಲ್ಲು ಇದಾಗಿದೆ.ಇನ್ಮುಂದೆ ಆದಿತ್ಯ L1 ನೌಕೆಯು ನಿಗದಿತ ಕಕ್ಷೆಯಲ್ಲಿ ನಿಂತು ಹಗಲು, ರಾತ್ರಿ ಹಾಗೂ ಗ್ರಹಣಗಳ ಅಡೆತಡೆ ಇಲ್ಲದೇ ಸೂರ್ಯನನ್ನು ನಿರಂತರವಾಗಿ ಅಧ್ಯಯನ ಮಾಡಲಿದೆ. ಸೂರ್ಯನಲ್ಲಿ ನಡೆಯುವ ಚಟುವಟಿಕೆಗಳು ಹಾಗೂ ಅಂತರಿಕ್ಷದ ವಾತಾವರಣದ ಮೇಲೆ ಅದರ ಪರಿಣಾಮವನ್ನು ಅಧ್ಯಯನ ನಡೆಸಲಿದೆ.ಇಸ್ರೋದ ಮಹತ್ವದ ಸಾಧನೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಭಾರತ ಮತ್ತೊಂದು ಹೆಗ್ಗುರುತನ್ನು ಸೃಷ್ಟಿಸಿದೆ. ಭಾರತದ ಮೊದಲ ಸೌರ ವೀಕ್ಷಣಾಲಯ ಆದಿತ್ಯ-ಎಲ್1 ತನ್ನ ಗಮ್ಯಸ್ಥಾನವನ್ನು ತಲುಪಿದೆ. ಇದು ಅತ್ಯಂತ ಸಂಕೀರ್ಣ ಮತ್ತು ಸಂಕೀರ್ಣವಾದ ಬಾಹ್ಯಾಕಾಶ ಕಾರ್ಯಾಚರಣೆಗಳ ನಡುವೆ ಸಾಕ್ಷಾತ್ಕಾರದಲ್ಲಿ ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಈ ಅಸಾಧಾರಣ ಸಾಧನೆಯನ್ನು ದೇಶದ ಜನತೆಯೊಂದಿಗೆ ಸೇರಿ ಶ್ಲಾಘಿಸುತ್ತೇನೆ. ಜೊತೆಗೆ ಮಾನವ ಪ್ರಯೋಜನಗಳಿಗಾಗಿ ವಿಜ್ಞಾನದ ಅನ್ವೇಷಣೆಗಳನ್ನು ಮುಂದುವರಿಸುತ್ತೇವೆ ಎಂದು ತಮ್ಮ ಎಕ್ಸ್ಖಾತೆಯಲ್ಲಿ ಬರೆದುಕೊಂಡಿದ್ದಾರೆ.