ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಗುತ್ತಿಗೆದಾರರ ಸಂಘ ಸಿಎಂಗೆ ಪತ್ರ ಬರೆದು ಕಳೆದ ಒಂದು ವರ್ಷದಿಂದ ಮಾಡಿರುವ ಕೆಲಸದ ಬಾಕಿ 1,200 ಕೋಟಿ ಬಿಲ್ ಬಾಕಿ ಇದೆ. ನಾವು ಹಣ ಹಾಕಿ ಅನೇಕ ಕಟ್ಟಡಗಳನ್ನು ಕಟ್ಟಿದ್ದೇವೆ. ಹೀಗಿದ್ದರೂ ಸರ್ಕಾರ ಮತ್ತು ಇಲಾಖೆ ಬಿಲ್ ಬಿಡುಗಡೆ ಮಾಡಿಲ್ಲ ಗುತ್ತಿಗೆದಾರರು ಬಾಕಿ ಹಣ ಸಿಗದೆ ಆತ್ಮಹತ್ಯೆ ದಾರಿ ಹಿಡಿಯುವ ಸ್ಥಿತಿಗೆ ತಲುಪಿದ್ದಾರೆ. ಕೂಡಲೇ ಬಿಲ್ ಬಿಡುಗಡೆ ಮಾಡಿವಂತೆ ಸಿಎಂ ಬೊಮ್ಮಾಯಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಗುತ್ತಿಗೆದಾರರ ಸಂಘ ಒತ್ತಾಯ ಮಾಡಿದ್ದು, ಬಾಕಿ ಬಿಲ್ ಬಿಡುಗಡೆ ಮಾಡದೇ ಹೋದರೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಎಚ್ಚರಿಕೆಯನ್ನು ಗುತ್ತಿಗೆದಾರರು ಸಂಘ ನೀಡಿದೆ.