ವಸತಿ ಇಲಾಖೆಯ ಕರ್ನಾಟಕ ಗೃಹ ಮಂಡಳಿ ವತಿಯಿಂದ ಕೆಂಗೇರಿ ವಲಗೇರಹಳ್ಳಿಯಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಕರ್ನಾಟಕ ರಾಜ್ಯದಲ್ಲಿ ಎಲ್ಲರಿಗೂ ವಸತಿ ಕಲ್ಪಿಸಲು ಬಹಳ ದೊಡ್ಡ ಪ್ರಮಾಣದಲ್ಲಿ ನಾವು ಕ್ರಮ ತೆಗೆದುಕೊಂಡಿದ್ದೇವೆ. 18 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದ್ದು, ಐದು ಲಕ್ಷಮನೆ ಮಂಜೂರು ಮಾಡಲಾಗಿದೆ ಈ ಹಿಂದಿನ ಕಾಂಗ್ರೆಸ್ ಸರ್ಕಾರ ಸರ್ಕಾರದ ಕೊನೆಯ ಅವಧಿಯಲ್ಲಿ 15 ಲಕ್ಷ ಮನೆ ಘೋಷಿಸಿ, 2,500 ಕೋಟಿ ರೂ. ನೀಡಿತ್ತು. ಅದರಲ್ಲಿ 1,000 ಕೋಟಿ ಖರ್ಚು ಮಾಡಿದ್ದೇನೆಂದು ಘೋಷಣೆ ಮಾಡಿತ್ತು. ಅಲ್ಲದೆ ಪ್ರಧಾನಮಂತ್ರಿ ಯೋಜನೆಯನ್ನೂ ಜನರಿಂದ ದೂರ ಇಟ್ಟಿತ್ತು. ಸ್ವಪ್ರತಿಷ್ಠೆಗಾಗಿ ಒಂದು ಸರ್ಕಾರ ಜನರ ಹಿತ ಕಾಯದೇ ಅನ್ಯಾಯ ಮಾಡಿತ್ತು ಎಂದು ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿವಾಗ್ದಾಳಿ ನಡೆಸಿದರು.