19 ವಿಪಕ್ಷಗಳ ಬಹಿಷ್ಕಾರಕ್ಕೆ ದೇವೇಗೌಡರು ಡೋಂಟ್ ಕೇರ್ – ಸಂಸತ್ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ನಿರ್ಧಾರ

ಇದೇ ತಿಂಗಳ 28ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಹೊಸ ಸಂಸತ್ ಭವನ ಉದ್ಘಾಟನೆಗೊಳ್ಳಲಿದೆ. ಮೋದಿ ಉದ್ಘಾಟನೆಗೆ ಆಕ್ಷೇಪ ವ್ಯಕ್ತಪಡಿಸಿರುವ 19 ವಿಪಕ್ಷಗಳು ಈ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ ಕಟ್ಟಡವನ್ನು ಲೋಕಾರ್ಪಣೆ ಮಾಡಬೇಕೆಂದು ಆಗ್ರಹಿಸಿವೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಭಾಗಿಯಾಗಲು ನಿರ್ಧರಿಸಿದ್ದಾರೆ. ಈ ಮೂಲಕ ಕಾರ್ಯಕ್ರಮವನ್ನು ಬಹಿಷ್ಕರಿಸಿರುವ ವಿಪಕ್ಷಗಳ ನಿರ್ಧಾರಕ್ಕೆ ಅವರು ಡೋಂಟ್ಕೇರ್ ಎಂದಿದ್ದಾರೆ. ಗುರುವಾರ ಜೆಡಿಎಸ್ ಸಭೆಯಲ್ಲಿ ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ಎಲ್ಲಾ ಶಾಸಕರ ಅಭಿಪ್ರಾಯವನ್ನು ಆಲಿಸಿದ್ದಾರೆ. ಈ ವೇಳೆ ಶಾಸಕರು ಹಾಗೂ ನಾಯಕರು ಕಾರ್ಯಕ್ರಮಕ್ಕೆ ಹೋಗುವಂತೆ ಸಲಹೆ ಕೊಟ್ಟಿದ್ದಾರೆ.ಸಲಹೆಯ ಹಿನ್ನಲೆಯಲ್ಲಿ ಅವರು ನೂತನ ಸಂಸತ್ ಭವನದ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವ ತೀರ್ಮಾನ ಕೈಗೊಂಡಿದ್ದಾರೆ. ದೇವೇಗೌಡರ ಜೊತೆ ಹಾಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಭಾಗಿಯಾಗಲಿದ್ದಾರೆ.

Leave a Reply

Your email address will not be published. Required fields are marked *