150ಕ್ಕೂ ಹೆಚ್ಚು ಕೇಸ್ಗಳಲ್ಲಿ ವಾಂಟೆಡ್ಆಗಿರುವ ಇಮ್ರಾನ್ಖಾನ್ಪ್ರಧಾನಿ ಹುದ್ದೆಯಲ್ಲಿದ್ದಾಗ ತಮಗೆ ಬಂದ ಉಡುಗೊರೆಗಳನ್ನ ಅಕ್ರಮವಾಗಿ ಮಾರಾಟ ಮಾಡಿಕೊಂಡಿದ್ದಾರೆ ಎಂಬ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ವಿಚಾರಣಾ ನ್ಯಾಯಾಲಯ ಖಾನ್ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿತು. ಜೊತೆಗೆ 5 ವರ್ಷ ಸಕ್ರಿಯ ರಾಜಕಾರಣದಿಂದಲೂ ಬ್ಯಾನ್ಮಾಡಿ ಆದೇಶಿಸಿತು. ಪಂಜಾಬ್ ಪೊಲೀಸರ ಪ್ರಕಾರ, ಖಾನ್ ಬಂಧನದ ನಂತರ ಪಂಜಾಬ್ನಾದ್ಯಂತ ಇಮ್ರಾನ್ಖಾನ್ಬೆಂಬಲಿಗರು ವ್ಯಾಪಕ ಪ್ರತಿಭಟನೆಗೆ ಮುಂದಾಗಿದ್ದರು. ಆದ್ದರಿಂದ ಪ್ರಾಂತ್ಯದ ವಿವಿಧ ಪ್ರದೇಶಗಳಲ್ಲಿ 200ಕ್ಕೂ ಹೆಚ್ಚು ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನ ಬಂಧಿಸಲಾಗಿದೆ. ಅವರಲ್ಲಿ 10ಕ್ಕೂ ಹೆಚ್ಚು ಬೆಂಬಲಿಗರ ವಿರುದ್ಧ ಭಯೋತ್ಪಾದನೆ ಆರೋಪದ ಮೇಲೆ ಕೇಸ್ದಾಖಲಿಸಲಾಗಿದೆ.