2003ರ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರದ ವಿರುದ್ಧ ಮೊದಲ ಬಾರಿಗೆ ಅವಿಶ್ವಾಸ ನಿರ್ಣಯ ಮಂಡನೆ ಆಗಿದೆ. ಕೇಂದ್ರದ ಮೋದಿ ಸರ್ಕಾರದ ದುರಹಂಕಾರವನ್ನು ಮುರಿಯಲು ಮತ್ತು ಮಣಿಪುರದ ಬಗ್ಗೆ ಮಾತನಾಡುವಂತೆ ಮಾಡಲು ಕೊನೆಯ ಅಸ್ತ್ರವನ್ನಾಗಿ ಇದನ್ನು ಬಳಸುವುದು ನಮ್ಮ ಕರ್ತವ್ಯ ಎಂದು ನಾವು ಭಾವಿಸುತ್ತೇವೆ ಎಂದು ವಿಪಕ್ಷಗಳು ಹೇಳಿವೆ. ಸ್ವಾತಂತ್ರ್ಯ ಬಂದ ನಂತರ ಲೋಕಸಭೆಯಲ್ಲಿ 27 ಬಾರಿ ಅವಿಶ್ವಾಸ ನಿರ್ಣಯ ಮಂಡನೆಯಾಗಿದೆ. 1963 ರಲ್ಲಿ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ ವಿರುದ್ಧ ಮೊದಲ ಅವಿಶ್ವಾಸ ನಿರ್ಣಯ ಮಂಡನೆ ಆಯಿತು. ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರು ಸುಮಾರು 15 ಅವಿಶ್ವಾಸ ನಿರ್ಣಯಗಳನ್ನು ಎದುರಿಸುವ ಮೂಲಕ ಅತೀ ಹೆಚ್ಚು ಅವಿಶ್ವಾಸ ಎದುರಿಸಿದ ಮೊದಲಿಗರಾಗಿದ್ದಾರೆ. ಅವರ ನಂತರ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಪಿವಿ ನರಸಿಂಹ ರಾವ್ ಅವರು ತಲಾ ಮೂರು ಅವಿಶ್ವಾಸ ಎದುರಿಸಿದ್ದಾರೆ. ಅಮಿತ್‌ಶಾಗೆ ಪತ್ರ ಬರೆದ ಖರ್ಗೆ ಮಣಿಪುರ ವಿವಾದದ ಬಗ್ಗೆ ಸಂಸತ್ತಿನಲ್ಲಿ ನಡೆದ ಜಗಳದ ಬಗ್ಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. “ನಾವು ಸಂಸತ್ತಿಗೆ ಬಂದು ಮಾತನಾಡಲು ಪ್ರಧಾನಿಯನ್ನು ಒತ್ತಾಯಿಸುತ್ತಿದ್ದೇವೆ. ಆದರೆ ಅದು ಅವರ ಪ್ರತಿಷ್ಠೆಗೆ ಧಕ್ಕೆ ತರುತ್ತದೆ. ನಾವು ಈ ದೇಶದ ಜನತೆಗೆ ಬದ್ಧರಾಗಿದ್ದೇವೆ ಮತ್ತು ಅದಕ್ಕೆ ನಾವು ಬೆಲೆ ತೆರುತ್ತೇವೆ. ದೀರ್ಘಕಾಲ ಅಧಿಕಾರದಲ್ಲಿದ್ದರೂ ಆಡಳಿತ ಹಾಗೂ ವಿರೋಧ ಪಕ್ಷಗಳ ನಡತೆಯ ದಾಖಲೆಗಳು ಇತಿಹಾಸದ ಪುಟಗಳಲ್ಲಿ ದಾಖಲಾಗಿರುವುದು ನಮಗೆ ತಿಳಿದಿದೆ ” ಎಂದು ಪತ್ರದಲ್ಲಿ ಬರೆಯಲಾಗಿದೆ.