ಖ್ಯಾತ ಉರ್ದು ಕವಿ ಫೈಜ್ ಅಹ್ಮದ್ ಅವರ ಸ್ಮರಣಾರ್ಥ ಲಾಹೋರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಖ್ತರ್ ಪಾಲ್ಗೊಂಡಿದ್ದರು. ಈ ವೇಳೆ ಪತ್ರಕರ್ತರೊಬ್ಬರು`ನೀವು ಪಾಕಿಸ್ತಾನಕ್ಕೆ ಹಲವು ಬಾರಿ ಭೇಟಿ ನೀಡಿದ್ದೀರಿ, ಆದ್ರೆ ನೀವು ಹಿಂತಿರುಗುವಾಗ, ಇವರು ಒಳ್ಳೆಯ ಜನ ಅನ್ನಿಸುತ್ತಾ?’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನಾವು ಒಬ್ಬರನ್ನೊಬ್ಬರು ದೂಷಿಸಬಾರದು. ಅದರಿಂದ ಸಮಸ್ಯೆಗಳು ಪರಿಹಾರ ಆಗುವುದಿಲ್ಲ 2008ರ ನವೆಂಬರ್ 26ರಂದು ನಡೆದ ಭೀಕರ ಮುಂಬೈ ದಾಳಿಯನ್ನು ನೆನಪಿಸಿಕೊಂಡರು. ಮುಂಬೈನಲ್ಲಿ ಭಯೋತ್ಪಾದನಾ ದಾಳಿ ನಡೆಸಿದ ದುಷ್ಕರ್ಮಿಗಳು, ಭಾರತ ದೂರು ನೀಡಿದ ಹೊರತಾಗಿಯೂ ಇನ್ನೂ ಪಾಕಿಸ್ತಾನದಲ್ಲಿ ಮುಕ್ತವಾಗಿ ಓಡಾಡಿಕೊಂಡಿದ್ದಾರೆ ಎಂದು ಚಿತ್ರ ಸಾಹಿತಿ ಜಾವೇದ್ ಅಖ್ತರ್ ಹೇಳಿದ್ದಾರೆ.