ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ನಿರ್ಧಾರ ಹೊರಬಿದ್ದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವಧಿಯನ್ನು ಮತ್ತೆ ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ಜೆಪಿ ನಡ್ಡಾ ಅವಧಿಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಸ್ಟ್ರೈಕ್ ರೇಟ್ ಹೆಚ್ಚಿದೆ. ನಡ್ಡಾ ಅವಧಿಯಲ್ಲಿ ಎದುರಿಸಿದ ಚುನಾವಣೆಗಳಲ್ಲಿ ಬಿಹಾರ, ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲಿ ಅಧಿಕಾರ ಹಿಡಿದಿದೆ. ಪಶ್ಚಿಮ ಬಂಗಾಳದಲ್ಲಿ ನಮ್ಮ ಸ್ಥಾನ ಹೆಚ್ಚಾಗಿದೆ. ಇನ್ನು ಗುಜರಾತ್‌ನಲ್ಲಿ ದಾಖಲೆಯ ಗೆಲುವು ಸಾಧಿಸಿದೆ 2024ರ ಲೋಕಸಭಾ ಚುನಾವಣೆವರೆಗೆ ಜೆಪಿ ನಡ್ಡಾ ಬಿಜೆಪಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ.