2028 ರಲ್ಲಿ ಭಾರತದಲ್ಲಿ COP33 ಶೃಂಗಸಭೆಯನ್ನು ಆಯೋಜಿಸಲು – ಪ್ರಧಾನಿ ಮೋದಿ ಪ್ರಸ್ತಾಪ

ದುಬೈನಲ್ಲಿ ನಡೆಯುತ್ತಿರುವ ಸಿಒಪಿ-28 ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಮೋದಿ, ಭಾರತದ ಜನಸಂಖ್ಯೆಯು ಜಾಗತಿಕ ಜನಸಂಖ್ಯೆಯ ಶೇ.17 ರಷ್ಟಿದೆ. ಆದರೆ ಜಾಗತಿಕ ಇಂಗಾಲದ ಹೊರಸೂಸುವಿಕೆಯಲ್ಲಿ ಭಾರತದ ಪಾತ್ರ ಕೇವಲ 4% ನಷ್ಟಿದೆ. ಜನಸಂಖ್ಯೆಯು ತುಂಬಾ ಕಡಿಮೆ ಇರುವ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಹೊರಸೂಸುವಿಕೆ ತುಂಬಾ ಕಡಿಮೆಯಾಗಿದೆ. ಜಾಗತಿಕ ಹೊರಸೂಸುವಿಕೆಯನ್ನು ತೀವ್ರವಾಗಿ ಕಡಿತಗೊಳಿಸಲು ಎಲ್ಲಾ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಇಂದು ಕರೆ ನೀಡಿದ್ದಾರೆ.NDC ಗುರಿಗಳನ್ನು ಸಾಧಿಸುವಲ್ಲಿ ನಾವು ವೇಗವಾಗಿ ಸಾಗುತ್ತಿದ್ದೇವೆ. ವಾಸ್ತವವಾಗಿ, ನಾವು ಗಡುವಿನ ಒಂಬತ್ತು ವರ್ಷಗಳ ಮೊದಲು ನಮ್ಮ ಪಳೆಯುಳಿಕೆಯಲ್ಲದ ಇಂಧನ ಗುರಿಗಳನ್ನು ತಲುಪಿದ್ದೇವೆ 2028 ರಲ್ಲಿ ಭಾರತದಲ್ಲಿ  COP33 ಶೃಂಗಸಭೆಯನ್ನು ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದಾರೆ. ಎಂದು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *