41 ಕಾರ್ಮಿಕರ ರಕ್ಷಣೆ ಯಶಸ್ವಿಯಾದ ಬೆನ್ನಲ್ಲೇ ಭಾವುಕರಾಗಿದ್ದ ಪ್ರಧಾನಿ ಮೋದಿ

ಮಂಗಳವಾರ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆ ನಡೆಯುತ್ತಿತ್ತು. ಕ್ಯಾಬಿನೆಟ್ ಸಹದ್ಯೋಗಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಕಾರ್ಯಚರಣೆ ನೇರ ಪ್ರಸಾರವನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದರು. ಕಾರ್ಯಚರಣೆ ಯಶಸ್ವಿಯಾದ ಬಳಿಕ ಸಿಕ್ಕಿಬಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ನಂತರ ಪ್ರಧಾನಿ ಭಾವುಕರಾದರು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.ಸುರಂಗ ಕುಸಿತದ ಬಳಿಕ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಜೊತೆಗೆ ನಿರಂತರವಾಗಿ ದೂರವಾಣಿ ಮೂಲಕ ಮಾಹಿತಿ ಪಡೆಯುತ್ತಿದ್ದರು. ಪ್ರಧಾನಿ ಕಾರ್ಯಲಯದಿಂದ ಮೇಲ್ವಿಚಾರಣೆಗೆ ವಿಶೇಷ ತಂಡವನ್ನು ಕಳುಹಿಸಿದ್ದರು. ಕಾರ್ಮಿಕರ ರಕ್ಷಣೆ ಬಳಿಕ ಎಕ್ಸ್‌ನಲ್ಲಿ ಟ್ವೀಟ್ ಮಾಡಿ ಕಾರ್ಯಚರಣೆಯಲ್ಲಿ ಭಾಗಿಯಾದ ಎಲ್ಲರನ್ನು ಶ್ಲಾಘಿಸಿದ್ದರು.

Leave a Reply

Your email address will not be published. Required fields are marked *