ಇಂದು ನೆಫಿಯೋ ರಿಯೋ 5ನೇ ಬಾರಿಗೆ ನಾಗಾಲ್ಯಾಂಡ್‌ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಾಗಾಲ್ಯಾಂಡ್ ರಾಜ್ಯಪಾಲ ಲಾ ಗಣೇಶನ್ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.