ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರನೇ ಗ್ಯಾರಂಟಿಯಾದ ‘ಅನ್ನಭಾಗ್ಯ’ ಯೋಜನೆಗೆ ಹಣ ವರ್ಗಾವಣೆ ಮೂಲಕ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಅನ್ನಭಾಗ್ಯ ಯೋಜನೆ ಅಡಿ ಅಂತ್ಯೋದಯ ಹಾಗೂ ಬಿಪಿಎಲ್ಕುಟುಂಬದ ಸದಸ್ಯರಿಗೆ ಪ್ರಸ್ತುತ ವಿತರಿಸುತ್ತಿರುವ 5 ಕೆ.ಜಿ. ಅಕ್ಕಿ ಜತೆಗೆ ಹೆಚ್ಚುವರಿ 5 ಕೆ.ಜಿ. ಅಕ್ಕಿ ನೀಡುವುದಾಗಿ ಹೇಳಲಾಗಿತ್ತು. ಅಕ್ಕಿ ಲಭ್ಯವಾಗದ ಕಾರಣ ಪ್ರತಿ ವ್ಯಕ್ತಿಗೆ 5 ಕೆ.ಜಿ. ಅಕ್ಕಿ ದರ ತಿಂಗಳಿಗೆ 170 ರು.ಗಳಂತೆ ಕುಟುಂಬ ಸದಸ್ಯರ ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ಜಮೆ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಕುರಿತ ಸಮಾರಂಭ ನಡೆಯಲಿದೆ.