500 ರೂ. ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವ ಅಥವಾ 1,000 ರೂ. ನೋಟುಗಳನ್ನು ಮರು ಪರಿಚಯಿಸುವ ಉದ್ದೇಶ ಇಲ್ಲ: RBI

ಆರ್ಥಿಕ ವರ್ಷ 2024 ರ ಎರಡನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಅನಾವರಣಗೊಳಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗವರ್ನರ್ ಶಕ್ತಿಕಾಂತ ದಾಸ್ ಅವರು, ಆರ್‌ಬಿಐ 500 ರೂ. ನೋಟುಗಳನ್ನು ಹಿಂತೆಗೆದುಕೊಳ್ಳುವ ಅಥವಾ 1,000 ರೂ. ಮುಖಬೆಲೆಯ ನೋಟುಗಳನ್ನು ಮರು ಪರಿಚಯಿಸುವ ಬಗ್ಗೆ ಯಾವುದೇ ಯೋಜನೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ, ಊಹಾಪೋಹ ಮಾಡದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. 2,000 ನೋಟುಗಳನ್ನು ಚಲಾವಣೆಯಿಂದ ಹಿಂದೆ ಪಡೆದ ಬಳಿಕ ಮಾರುಕಟ್ಟೆಯಲ್ಲಿದ್ದ 3.62 ಲಕ್ಷ ಕೋಟಿ ರೂ. ಪೈಕಿ 1.82 ಲಕ್ಷ ಕೋಟಿ ರೂ. ಬ್ಯಾಂಕುಗಳಿಗೆ ಮರಳಿದೆ. ಇದರ ಪ್ರಮಾಣ 50% ರಷ್ಟಾಗಿದೆ. ಬ್ಯಾಂಕುಗಳಿಗೆ ಬಂದ ಹಣದ ಪೈಕಿ 85% ರಷ್ಟು ನೋಟುಗಳು ಬ್ಯಾಂಕ್ ಠೇವಣಿಗಳಾಗಿ ಹಿಂತಿರುಗಿದರೆ, ಉಳಿದ ಪ್ರಮಾಣದ ಹಣ ನೋಟು ವಿನಿಮಯಕ್ಕಾಗಿ ಬಂದಿವೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *