7 ಪ್ರಮುಖ ಒಪ್ಪಂದಗಳಿಗೆ ಭಾರತ ಹಾಗೂ ಬಾಂಗ್ಲಾದೇಶ ಸಹಿ ಹಾಕಿದೆ.

ಭಾರತ-ಬಾಂಗ್ಲಾ ದೇಶದ ನಡುವಿನ ಸಂಬಂಧಗಳನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ 4 ದಿನಗಳ ಭೇಟಿಗಾಗಿ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ನವದೆಹಲಿಗೆ ಆಗಮಿಸಿದ್ದಾರೆ. ಈ ವೇಳೆ ಪ್ರಾದೇಶಿಕ ಸಂಪರ್ಕ ಉಪಕ್ರಮ ವಿಸ್ತರಣೆ, ದಕ್ಷಿಣ ಏಷ್ಯಾದಲ್ಲಿ ಸ್ಥಿರತೆ ಸ್ಥಾಪಿಸುವುದು , ರಕ್ಷಣಾ ಸಹಕಾರವನ್ನು ನವೀಕರಿಸುವುದು ಸೇರಿದಂತ 7 ಪ್ರಮುಖ ಒಪ್ಪಂದಗಳಿಗೆ ಭಾರತ ಹಾಗೂ ಬಾಂಗ್ಲಾದೇಶ ಸಹಿ ಹಾಕಿದೆ. ಈ ವೇಳೆ ಮಾತನಾಡಿದ ಶೇಕ್ ಹಸಿನಾ, ಭಾರತದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಇರುವವರೆಗೆ ಭಾರತ ಹಾಗೂ ಬಾಂಗ್ಲಾದೇಶದ ನಡುವಿನ ಸಂಬಂಧಕ್ಕೆ ಯಾವುದೇ ಅಡ್ಡಿ ಇಲ್ಲ. ಎಂದು ಶೇಕ್ ಹಸಿನಾ ಹೇಳಿದ್ದಾರೆ.

Leave a Reply

Your email address will not be published. Required fields are marked *