ಜ್ಞಾನಜ್ಯೋತಿ ಸಭಾಂಗಣದಲ್ಲಿ ಒಂಭತ್ತು ನೂತನ ವಿಶ್ವವಿದ್ಯಾಲಯಗಳನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಶಿಕ್ಷಣ ಬೆಳವಣಿಗೆ ಆಗಬೇಕು. ಈ ರೀತಿಯ ವಿಶ್ವವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ. ಮುಂದಿನ ದಿನಗಳಲ್ಲಿ ಎಲ್ಲರೂ ಕರ್ನಾಟಕದ ಮಾದರಿ ಅಳವಡಿಸಿಕೊಳ್ಳುವಂತಾಗಬೇಕು ಎಂದರು.ದೇಶದಲ್ಲಿ ಉನ್ನತ ಶಿಕ್ಷಣ ಅಂದರೆ ಐಐಟಿ. ಅದಕ್ಕೆ ಸಿಇಟಿ ಮೂಲಕ ಆಯ್ಕೆ ಆಗಬೇಕು. ನಮ್ಮ ಮಕ್ಕಳೂ ಐಐಟಿ ಮಾದರಿಯಲ್ಲಿ ಶಿಕ್ಷಣ ಪಡೆಯಬೇಕು ಎಂದು ಕೆಐಟಿ ಸ್ಥಾಪನೆ ಮಾಡಲಾಗಿದೆ. ಮುಂದಿನ 5 ವರ್ಷಗಳಲ್ಲಿ ಎಲ್ಲಾ ಸಂಸ್ಥೆಗಳು ಐಐಟಿ ಮಾದರಿಯಲ್ಲಿ ಇರಲಿವೆ. ಐಐಟಿ ಹುಡುಕಿಕೊಂಡು ಹೋಗುವ ಬದಲು ಇಲ್ಲಿಯೇ ಐಐಟಿ ಸೃಷ್ಟಿಸುತ್ತಿದ್ದೇವೆ. ಜಗತ್ತಿನ ಉನ್ನತ ವಿವಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ನಾಯಕರಾಗಿ ಹೊರ ಹೊಮ್ಮಿದ್ದಾರೆ.ಪಾಕಿಸ್ತಾನದ ಪ್ರಜೆಗಳು ಮೋದಿಯಂಥ ಪ್ರಧಾನಿ ಬೇಕು ಅಂತ ಹೇಳುತ್ತಿದ್ದಾರೆ. ಚೀನಾ ಕೂಡ ಭಾರತ ಕೊರೊನಾ ನಿಯಂತ್ರಣ ಮಾಡಿದ್ದನ್ನು ಮೆಚ್ಚಿಕೊಂಡಿದೆ ಎಂದರು.