ರಾಜ್ಯದ ಅತ್ಯಂದ ದೊಡ್ಡ ಮಹಾನಗರ ಪಾಲಿಕೆ ಆಗಿರುವ ಬೃಹತ್ಬೆಂಗಳೂರು ಮಹಾನಗರ ಪಾಲಿಕೆ 2023-24ನೇ ಸಾಲಿನ ಆಯವ್ಯಯ ಮಂಡನೆಯ ಅಂತಿಮ ಸಿದ್ಧತೆಗಳು ನಡೆಯುತ್ತಿವೆ. ಈ ಬಾರಿ ಅಂದಾಜು 9 ಸಾವಿರ ಕೋಟಿ ಗಾತ್ರದ ಆಯವ್ಯಯ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ ವರ್ಷದ ಕೆಲ ಯೋಜನೆಗಳ ಪುನರಾವರ್ತನೆಗೆ ಹಾಗೂ ಕಾಮಗಾರಿ ಪೂರ್ಣ ಮಾಡಲು ಹೆಚ್ಚು ಹಣ ಮೀಸಲಿಡಲಾಗಿದೆ. ಆರ್ಥಿಕ ಸಂಕಷ್ಟದಲ್ಲಿರುವ ಪಾಲಿಕೆಗೆ ಹೊಸ ಯೋಜನೆ ಘೋಷಿಸದೆ ಇರಲು ತೀರ್ಮಾನಿಸಲಾಗಿದೆ. ಪಾಲಿಕೆಯಿಂದ ಹಲವು ಸಂಘ ಸಂಸ್ಥೆಗಳಿಗೆ ನೀಡಲಾಗುತ್ತಿದ್ದ ಅನುದಾನಕ್ಕೆ ಕತ್ತರಿ ಬೀಳಲಿದೆ.