ಬೆಂಗಳೂರು ರಸ್ತೆಗುಂಡಿ ಮುಚ್ಚುವಂತೆ ಬಿಬಿಎಂಪಿಗೆ ಹೈಕೋರ್ಟ್ಹಲವು ಬಾರಿ ಛೀಮಾರಿ ಹಾಕಿದರೂ ಎಮ್ಮೆಯ ಮೇಲೆ ನೀರು ಸುರಿದಂತಾಗಿದೆ. ಇಂದು ಕೋರ್ಟ್ನಲ್ಲಿ ಬಿಬಿಎಂಪಿ ಉತ್ತರ ನೀಡಿದ್ದು ಶೇಕಡ 98ರಷ್ಟು ಗುಂಡಿಗಳನ್ನು ಮುಚ್ಚಿರುವುದಾಗಿ ಹೇಳಿಕೊಂಡಿದೆ. ಆದರೆ ಇದು ಎಷ್ಟರಮಟ್ಟಿಗೆ ಸತ್ಯ. ಇದೇ ಕಾರಣಕ್ಕೆ ಕೋರ್ಟ್ಕೆಂಡಾಮಂಡಲವಾಗಿದ್ದು, ನಿಮಗೆ ನೀವೇ ಸರ್ಟಿಫಿಕೇಟ್ಕೊಟ್ಟರೆ ಹೇಗೆ. ಬಿಬಿಎಂಪಿ ಗೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆ ತೆಗೆದುಕೊಂಡಿದೆ. ಹಲವರು ತಮ್ಮ ಅಮೂಲ್ಯ ಪ್ರಾಣ ಕಳೆದುಕೊಂಡಿದ್ದಾರೆ. ಕೋರ್ಟ್ ಆದೇಶಗಳನ್ನ ಬಿಬಿಎಂಪಿ ಸರಿಯಾಗಿ ಪಾಲಿಸಿಲ್ಲ ಬಿಬಿಎಂಪಿ ಹಾಗೂ ಖಾಸಗಿ ಕಂಪೆನಿಗಳು ನಿರ್ಮಿಸಿರುವ ರಸ್ತೆಗಳನ್ನು ಪರಿಶೀಲಿಸಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ಅವರು ಪರಿಶೀಲಿಸಲು ಸೂಚನೆ ನೀಡಲಾಗಿದೆ.